
ರಾಜ್ಯದಲ್ಲಿ ಆ. 27ರಿಂದ ಭಾರಿ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿಜಯನಗರ, ತುಮಕೂರು, ರಾಮನಗರ ,ಮಂಡ್ಯ ಕೋಲಾರ ದಾವಣಗೆರೆ ಜಿಲ್ಲೆಯಲ್ಲೂ ಭಾರಿ ಮಳೆ ಆಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್