
ರಾಜ್ಯದಲ್ಲಿ ಸೆಪ್ಟಂಬರ್ 22 ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ,ದಕ್ಷಿಣ ಕನ್ನಡ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು ಬೆಂಗಳೂರು ,ಚಿಕ್ಕಬಳ್ಳಾಪುರ ,ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್








