
ರಾಜ್ಯ ರಾಜಧಾನಿಯಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ.
ಮುಂದಿನ ಎರಡು ದಿನಗಳ ಕಾಲ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ ,ಗದಗ ,ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.
ಶೀತಗಾಳಿಯ ಪ್ರಭಾವದಿಂದ ಜನ ಜೀವನದಲ್ಲಿ ಬದಲಾವಣೆ ಕಂಡುಬಂದಿದ್ದು ,ಮಕ್ಕಳು ಮತ್ತು ಹಿರಿಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.





