
ಹಲವು ದಿನಗಳಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು ಇಂದು ಕೂಡ ರಾಜ್ಯದ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಕಲಬುರಗಿ ,ಬೀದರ್, ಯಾದಗಿರಿ ,ರಾಯಚೂರು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಘೋಷಣೆಯಾಗಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ,ಚಿಕ್ಕಬಳ್ಳಾಪುರ, ಚಿತ್ರದುರ್ಗ ,ದಾವಣಗೆರೆ, ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.





