
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಏರಿಕೆಯಾಗಲಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸಲಿದ್ದು ಬೀದರ್ ,ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಚಳಿ ಏರಿಕೆಯಾಗಲಿದೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.






