
ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೀದರ್ ,ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯಪುರ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



















