
ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹಾಸನ, ಕೊಡಗು ,ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಮಾರ್ಚ್ 2ನೇ ವಾರದಿಂದ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಇನ್ನಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.






















































