
ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಾಗಿದ್ದು, ಇಂದು ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ದಾವಣಗೆರೆ, ಕೋಲಾರ ,ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.






















































