
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಿಗೆ ಯೆಲ್ಲೋ ಅಲೆಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬಿಜಾಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ ವಿಜಯನಗರ, ದಾವಣಗೆರೆ, ಶಿವಮೊಗ್ಗ , ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು ಹಾಸನ ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.











































