
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ ,ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಯಲ್ಲೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ.






















































