
ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು ಮುಂದಿನ ಎರಡು ದಿನಗಳ ಕಾಲ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ,ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಚಿಕ್ಕಮಂಗಳೂರು ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.













