
ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಇದ್ದು, ಇಂದು ಕೂಡ ಮುಂದುವರೆಯಲಿದೆ.
ಕರಾವಳಿ ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ.
ಬೆಂಗಳೂರು ನಗರದಲ್ಲೂ ಚಳಿಯ ಪ್ರಮಾಣ ಹೆಚ್ಚಿರಲಿದೆ.
ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಬೀದರ್ ವಿಜಯಪುರ, ಬಾಗಲಕೋಟೆ ,ಹಾವೇರಿ ,ಗದಗ ,ಧಾರವಾಡ ಕಲಬುರ್ಗಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



















