
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಲಿದ್ದು ಬಿಸಿಲಿನ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ತಾಪಮಾನ 31 ಡಿಗ್ರಿ ಯಿಂದ 33 ಡಿಗ್ರಿ ಸೆಲ್ಸಿಯಸ್ ನವರಿಗೆ ದಾಖಲಾಗುವ ಸಾಧ್ಯತೆ ಇದೆ.
ರಾಯಚೂರು, ಬಳ್ಳಾರಿ ,ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಲಿದೆ. ಮಂಗಳೂರು, ಉಡುಪಿ, ಕಾರವಾರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಾಪಮಾನ ಹೆಚ್ಚಿರುವ ಕಾರಣ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.



















