
ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ,ಕೊಡಗು ,ಕೋಲಾರ, ಬೆಂಗಳೂರು, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.
ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದ್ದು, ಮಕ್ಕಳು ಮತ್ತು ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸಮತೋಲನ ಆಹಾರ ಸೇವಿಸುವಂತೆ ಸಲಹೆ ನೀಡಲಾಗಿದೆ.




