
ಇಂದಿನಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಜಾನೆಯಿಂದಲೇ ಪ್ರಮುಖ ನಗರಗಳಲ್ಲಿ ಮಳೆ ಆರಂಭಗೊಂಡಿದ್ದು ಮಧ್ಯಾಹ್ನದ ನಂತರ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.
ಕರಾವಳಿ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಲಿದೆ.






























