
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರಿ ಮಳೆಯ ಕಾರಣ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು ,ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
































