
ಕರಾವಳಿ ಕರ್ನಾಟಕ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿಯೂ ಮಳೆಯ ಸಾಧ್ಯತೆ ಇದೆ.
ಧಾರವಾಡ, ಹಾವೇರಿ ,ಗದಗ ಜಿಲ್ಲೆಗಳಿಗೆ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

































