
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿ ,ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು ಸಣ್ಣಗೆ ಮಳೆಯ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.





















































































