
ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ,ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ ,ದಾವಣಗೆರೆ, ಕೋಲಾರ, ಮಂಡ್ಯ ,ಮೈಸೂರು, ರಾಮನಗರ, ತುಮಕೂರು ,ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.


































