
ಮುಂದಿನ ಹಲವು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಜುಲೈ 5 ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂಕುಸಿತದ ಸಾಧ್ಯತೆ ಇರುವ ಕಾರಣ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು ,ಹಾಸನ, ಶಿವಮೊಗ್ಗ ,ಚಿಕ್ಕಮಗಳೂರು, ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.





















































































