
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಸುತ್ತಮುತ್ತ ಪ್ರವಾಹದ ಭೀತಿ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲೂ ಭಾರಿ ಮಳೆಯಾಗುತ್ತಿದ್ದು ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.








































