
ರಾಜ್ಯದಲ್ಲಿ ಇಂದು ಮುಂಗಾರು ತೀವ್ರಗೊಂಡಿದ್ದು ಕರಾವಳಿ ಮತ್ತು ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ ಉತ್ತರ ಕನ್ನಡ ಶಿವಮೊಗ್ಗ ಚಿಕ್ಕಮಗಳೂರು ಹಾಸನ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ನದಿ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹಾಸನ ಸಕಲೇಶಪುರ ತಾಲೂಕಿನಲ್ಲೂ ಬಿರುಗಾಳಿಯ ಜೊತೆ ಮಳೆಯಾಗಲಿದೆ.








































