
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮಳೆ ಹೆಚ್ಚಿರಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಜುಲೈ 13 ರಿಂದ ಜುಲೈ 15 ರವರೆಗೆ ಮಳೆಯಾಗಲಿದೆ.











































