
ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬೀದರ್, ವಿಜಯಪುರ ,ಧಾರವಾಡ, ಗದಗ, ರಾಯಚೂರು, ಹಾವೇರಿ, ಯಾದಗಿರಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.


















































