
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಜುಲೈ 27 ,28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಜುಲೈ 27ರಂದು ಬೆಳಗಾವಿ ,ಧಾರವಾಡ ,ಹಾವೇರಿ, ಗದಗ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.


















































