
ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಬಾಗಲಕೋಟೆ, ಬೀದರ್, ಧಾರವಾಡ ,ಗದಗ ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.


















































