
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ ಗಾಳಿಯ ಜೊತೆ ಮಳೆ ಆಗಲಿದ್ದು, ಮೀನುಗಾರರು ಮತ್ತು ಕರಾವಳಿ ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

























































