
ನವದೆಹಲಿ: ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆಯಲ್ಲಿ ಪಾಲ್ಗೊಂಡವರ ಮೇಲೆ ಟ್ಯಾಂಕರ್ ಹರಿದು ಘಟನೆಯಲ್ಲಿ 9 ವಿದ್ಯಾರ್ಥಿಗಳು ಮೃತಪಟ್ಟು 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜ್ಯ ಸರ್ಕಾರವು ಹಾಸನದಲ್ಲಿ ಮಡಿದ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಕುರಿತು ತೀವ್ರ ನೋವು ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಕರ್ನಾಟಕದ ಹಾಸನದಲ್ಲಿ ನಡೆದ ದುರಂತ ಹೃದಯ ಕಿವುಚುವಂತಿದೆ. ಈ ದುರಂತದ ಸಮಯದಲ್ಲಿ ನಾನು ಘಟನೆಯಲ್ಲಿ ಮಡಿದ ಕುಟುಂಬಸ್ಥರು, ಗಾಯಗೊಂಡವರ ಜೊತೆಗಿದ್ದೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಕ್ಕೆ PMNRF ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,00 ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.













