
ಹಿರಿಯಡ್ಕ: ಆನ್ಲೈನ್ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ ಎಂದು ನಂಬಿಸಿ ಮಹಿಳೆಯಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಹಣ ಹೂಡಿದರೆ ಉತ್ತಮ ಆದಾಯ ದೊರೆಯುತ್ತದೆ ಎಂದು ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಅವರ ಮಾತಿಗೆ ಮರುಳಾದ ಮಹಿಳೆ ಹಂತ ಹಂತವಾಗಿ ಸುಮಾರು 4 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ದರು.
ಬಳಿಕ ಹೂಡಿಕೆ ಮಾಡಿದ ಹಣವನ್ನು ಹಿಂದಿರುಗಿಸುವಂತೆ ಕೇಳಿದಾಗ ಆರೋಪಿಗಳು ಕೇವಲ ಸ್ವಲ್ಪ ಹಣವನ್ನಷ್ಟೇ ಮರಳಿ ನೀಡಿ ಉಳಿದ 3,50,000 ಮೊತ್ತವನ್ನು ನೀಡದೇ ಸಂಪರ್ಕ ತಪ್ಪಿಸಿಕೊಂಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.


































