
ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ನ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ.
ಗುರುವಾರ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಘಟನೆಯಲ್ಲಿ ಗಾಯಗೊಂಡಿರುವ ಇತರ 7 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದ್ದು ಓರ್ವ ಬಾಲಕನ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಕುಟುಂಬದವರ ಜತೆ ಚರ್ಚಿಸಿ ಇನ್ನು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಕಿಮ್ಸ್ ಆಸ್ಪತ್ರೆ ಬಳಿ ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದಾರೆ.




