
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾತನಾಡಿ ತಮ್ಮ ಹೊಸ ಮನೆಯ ಗೃಹ ಪ್ರವೇಶ ಡಿಸೆಂಬರ್ ನಲ್ಲಿ ಮಾಡಲಾಗುತ್ತಿದ್ದು, ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ. ನಾನು ಯಾವುದೇ ರಾಜಕಾರಣಿಗಳನ್ನು, ಕಾರ್ಯಕರ್ತರನ್ನು ಹಾಗೂ ಮಾಧ್ಯಮದವರನ್ನೂ ಕೂಡ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ.
ಮನೆಯ ಕೆಲಸ ಬಹುತೇಕ ಮುಕ್ತಾಯವಾಗಿದ್ದು ಇದು ಕೇವಲ ನಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ನಡೆಯುವ ಸಮಾರಂಭವಾಗಿರುತ್ತದೆ. ಯಾರನ್ನೂ ಗೃಹ ಪ್ರವೇಶಕ್ಕೆ ಆಹ್ವಾನಿಸುವುದಿಲ್ಲ. ಮಾಧ್ಯಮದವರನ್ನು ಕೂಡ ಆಹ್ವಾನಿಸುವುದಿಲ್ಲ, ಒಂದು ವೇಳೆ ನೀವು ಬಂದರೂ ಬೇಡ ಎಂದು ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.



















