26.8 C
Udupi
Monday, April 13, 2026
spot_img
spot_img
HomeBlogಲೋಕಸಭಾ ಸಚೇತಕರಾಗಿ ಆಯ್ಕೆಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ : ಸರಳ ಸಜ್ಜನಿಕೆಗೆ ಮಣೆ ಹಾಕಿದ...

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿ : ಸರಳ ಸಜ್ಜನಿಕೆಗೆ ಮಣೆ ಹಾಕಿದ ಪಕ್ಷ…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನೂತನವಾಗಿ ಆಯ್ಕೆಯಾದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭಾರತೀಯ ಜನತಾ ಪಾರ್ಟಿಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ.

ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿರುವ ಬಿಜೆಪಿ ಸಂಸದೀಯ ಮಂಡಳಿಯ ಕಾರ್ಯದರ್ಶಿ ಡಾ.ಶಿವ ಶಕ್ತಿ ನಾಥ್ ಬಾಕ್ಸಿ ಅವರು ಒಟ್ಟು 16 ಸಂಸದರನ್ನು ಲೋಕಸಭೆಯ ಮುಖ್ಯ ಸಚೇತಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕರ್ನಾಟಕದಿಂದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಣೆ ಹಾಕಿದ್ದು ಪ್ರಾಮಾಣಿಕತೆ ಮತ್ತು ಹಿರಿತನಕ್ಕೆ ಬಿಜೆಪಿ ನೀಡಿದ ಗೌರವವಾಗಿದೆ ಎಂದು ಬಿಜೆಪಿ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಸಂಸದ ಕೋಟ ಈ ಜವಾಬ್ದಾರಿ ನೀಡಿರುವುದಕ್ಕೆ ಪಕ್ಷದ ವರಿಷ್ಠರಿಗೆ ಧನ್ಯವಾದಗಳು ಸಲ್ಲಿಸಿದರು.ಈ ಹಿಂದೆ ನಾಲ್ಕು ಬಾರಿ ವಿಧಾನ ಪರಿಷತ್‌ ಶಾಸಕರಾಗಿ, ನಾಲ್ಕು ಬಾರಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಆಡಳಿತ ನಡೆಸಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಪ್ರಾಮಾಣಿಕ ನಾಯಕರೆನಿಸಿಕೊಂಡ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬಿಜೆಪಿ ಈ ಬಾರಿ ಮುಖ್ಯ ಸಚೇತಕ ಹುದ್ದೆಗೆ ಆಯ್ಕೆ ಮಾಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page